ಬೆಳಗಾವಿ : ನಗರದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ನೇತ್ರತ್ವದಲ್ಲಿ ಇಂದು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಾಯಿತು.ಬೆ
ಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
ಈ ಸಮಾರಂಭದಲ್ಲಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿ, ಸಚಿವರಾದ ಶ್ರೀ ಮಹಾಂತೇಶ ಕೌಜಲಗಿ, ಡಾ. ಶರಣಪ್ರಕಾಶ ಪಾಟೀಲ, ರಾಮಲಿಂಗಾರೆಡ್ಡಿ, ಡಾ.ಎಂ.ಸಿ.ಸುಧಾಕರ್, ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ, ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಶಾಸಕರಾದ ಆಸೀಫ್ ಸೇಠ್, ಅಶೋಕ ಪಟ್ಟಣ, ಭರಮಗೌಡ ಕಾಗೆ, ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ನಾಗರಾಜ ಯಾದವ್, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ ಚಿಂಗಳೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಬಿಮ್ಸ್ ಸಿಬ್ಬಂದಿ ವರ್ಗ, ಚನ್ನಮ್ಮ ವಿವಿ ಸಿಬ್ಬಂದಿ, ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.












